ಇಂದು ಸಂಜೆ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ರಾಹುಲ್ ಗಾಂಧಿ
ತುಮಕೂರು: ಪರಮಪೂಜ್ಯನೀಯ ಲಿಂಗೈಕ್ಯ ಶಿವಕುಮಾರ ಶ್ರೀಗಳ 115ನೇ ಜಯಂತಿ ಜರುಗಲಿದ್ದು, ಈ ಹಿನ್ನಲೆಯಲ್ಲಿ ಇಂದು ಗುರುವಾರ ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ.
ಇಂದು ಸಂಜೆ 4 ಗಂಟೆಗೆ ರಸ್ತೆ ಮೂಲಕ ಸಿಂದಗಂಗಾ ಮಠಕ್ಕೆ ಆಗಮಿಸಲಿದ್ದಾರೆ. ಸಿದ್ದಗಂಗಾ ಮಠದ ಶಿವಕುಮಾರ್ ಶ್ರೀ ಗಳ ಗದ್ದುಗೆ ದರ್ಶನ ಪಡೆದು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಸಿದ್ದಲಿಂಗ ಶ್ರೀ ಭೇಟಿಯಾಗಿ ಆಶಿರ್ವಾದ ಪಡೆಯಲಿದ್ದಾರೆ. ನಂತರ ಮಠದಲ್ಲಿ ಪ್ರಸಾದ ಸೇವಿಸಿ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ.
ಬೆಂಗಳೂರಿನಲ್ಲಿ ಸಭೆ ನಡೆಯಲಿದ್ದು, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಎಂ.ಬಿ.ಪಾಟೀಲ್, ಪರಮೇಶ್ವರ್, ಈಶ್ವರ್ ಖಂಡ್ರೆ ಸೇರಿದಂತೆ ಕಾಂಗ್ರೆಸ್ ನಾಯಕರು ಭಾಗಿಯಾಗಲಿದ್ದಾರೆ.









