Rahul Gandhi : ಗಡ್ಡ ಟ್ರಿಮ್ ಮಾಡಿ ಹೊಸ ಲುಕ್ ನಲ್ಲಿ ಕಂಗೊಳಿಸಿದ ರಾಹುಲ್ ಗಾಂಧಿ…
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಒಂದು ವಾರದ ಇಂಗ್ಲೆಂಡ್ ಪ್ರವಾಸಕ್ಕಾಗಿ ಮಂಗಳವಾರ (ಫೆಬ್ರವರಿ 28) ಬ್ರಿಟನ್ಗೆ ತಲುಪಿದ್ದಾರೆ. ಅಲ್ಲಿ ಅವರು ಬುಧವಾರ (ಮಾರ್ಚ್ 1) ಕೇಂಬ್ರಿಡ್ಜ್ ವಿಶ್ವವಿದ್ಯಾಲಯವನ್ನ ಉದ್ದೇಶಿಸಿ ಉಪನ್ಯಾಸ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಸುಪ್ರಿಯಾ ಭಾರದ್ವಾಜ್ ಎಂಬ ಟ್ವಿಟರ್ ಬಳಕೆದಾರರು ರಾಹುಲ್ ಗಾಂಧಿ ಜೊತೆಗಿರುವ ಚಿತ್ರವನ್ನು ಟ್ವೀಟ್ ಮಾಡಿದ್ದಾರೆ. ರಾಹುಲ್ ಗಾಂಧಿ ಕೇಂಬ್ರಿಡ್ಜ್ ತಲುಪಿದ್ದಾರೆ ಎಂಬ ಶೀರ್ಷಿಕೆಯೊಂದಿಗೆ ಈ ಪೋಸ್ಟ್ ಸದ್ಯ ವೈರಲ್ ಆಗಿದೆ. ಅದಕ್ಕೆ ಕಾರಣ ಈ ಫೋಟೋದಲ್ಲಿ ರಾಹುಲ್ ಗಾಂಧಿ ವಿಶೇಷ ಲುಕ್ ನಲ್ಲಿ ಕಾಣಿಸಿಕೊಂಡಿರುವುದು. ತಲೆ ಕೂದಲು ಮತ್ತು ಗಡ್ಡವನ್ನ ಟ್ರೀಮ್ ಮಾಡಿಕೊಂಡು ಸೂಟ್ ಮತ್ತು ಟೈ ನೊಂದಿಗೆ ಹಿಂದೆದೂ ಕಾಣದ ರೀತಿಯಲ್ಲಿ ಮಿಂಚಿದ್ದಾರೆ.
ಇದಕ್ಕೂ ಮೊದಲು ರಾಹುಲ್ ಗಾಂಧಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆ ಕೈಗೊಂಡಿದ್ದು ಗೊತ್ತೇ ಇದೆ. ಈ ಪ್ರವಾಸದಲ್ಲಿ ರಾಹುಲ್ ಗಾಂಧಿ ಕೂದಲಿಗೆ ಕತ್ತರಿ ಹಾಕದೇ ಗಡ್ಡ ಮತ್ತು ಬಿಳಿ ಬಣ್ಣದ ಟೀ ಶರ್ಟ್ ನಲ್ಲಿ ಪ್ರವಾಸ ಪೂರೈಸಿದ್ದರು. ಭಾರತ್ ಜೋಡೋ ಯಾತ್ರೆ ಮುಗಿದ ನಂತರವೂ ಕೆಲ ದಿನಗಳ ಕಾಲ ರಾಹುಲ್ ಗಾಂಧಿ ಅದೇ ರೀತಿಯಲ್ಲಿ ಕಾಣಿಸಿಕೊಂಡಿದ್ದರು.
ಆದರೆ ಇತ್ತೀಚಿನ ಇಂಗ್ಲೆಂಡ್ ಪ್ರವಾಸಕ್ಕಾಗಿ ರಾಹುಲ್ ತಮ್ಮ ಶೈಲಿಯನ್ನು ಸಂಪೂರ್ಣವಾಗಿ ಬದಲಾಯಿಸಿದ್ದಾರೆ. ರಾಹುಲ್ ಯುಕೆಯ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸ್ ನೀಡುವ ಕುರಿತಾಗಿ ಇಂಗ್ಲೆಂಡ್ ತಲುಪಿದ್ದಾರೆ. ಇಂಗ್ಲೆಂಡ್ ಭೇಟಿಯ ಭಾಗವಾಗಿ ಅವರು ಮಾರ್ಚ್ 5 ರಂದು ಲಂಡನ್ನಲ್ಲಿರುವ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಲಿದ್ದಾರೆ. ಲಂಡನ್ನಲ್ಲಿ ಭಾರತೀಯ ಸಾಗರೋತ್ತರ ಕಾಂಗ್ರೆಸ್ (ಐಒಸಿ) ಸದಸ್ಯರನ್ನೂ ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿದೆ.
Rahul Gandhi: Trimmed his beard and put on a new look.