ದೇಶದಲ್ಲಿ ಕೊರೊನಾ ಲಸಿಕೆಯ ಹಬ್ಬ ಆಚರಿಸುವ ಪರಿಸ್ಥಿತಿಯಿಲ್ಲ – ರಾಹುಲ್ ಗಾಂಧಿ
ನವದೆಹಲಿ: ದೇಶದಲ್ಲಿ ಕೊರೊನಾ ಲಸಿಕೆಯ ಹಬ್ಬ ಆಚರಿಸುವ ಪರಿಸ್ಥಿತಿ ಇಲ್ಲ, ಬದಲಿಗೆ ಲಸಿಕೆ ಕೊರತೆ ಗಂಭೀರತೆಯನ್ನು ಪರಿಗಣಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟ್ ಮಾಡಿ ಮೋದಿ ಅವರನ್ನು ಟೀಕಿಸಿದ್ದಾರೆ.
ಎಪ್ರಿಲ್ 11 ರಿಂದ 14 ರವರೆಗೆ ಲಸಿಕಾ ಉತ್ಸವವನ್ನು ಆಚರಿಸುವಂತೆ ಎಲ್ಲಾ ರಾಜ್ಯಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ನೀಡಿದ್ದರು. ಈ ಕುರಿತಾಗಿ ರಾಹುಲ್ ಗಾಂಧಿ ಟ್ವೀಟ್ ಮೂಲಕವಾಗಿ ಮೋದಿಯವರನ್ನು ಟೀಕಿಸಿದ್ದಾರೆ.
‘ ಕೊರೋನಾ ಹೆಚ್ಚಾಗುತ್ತಿರುವ ಈ ಸಮಯದಲ್ಲಿ ಲಸಿಕೆ ಕೊರತೆಯು ಬಹಳ ಗಂಭೀರ ಸಮಸ್ಯೆಯಾಗಿದೆ. ಇದು ಉತ್ಸವ ಅಲ್ಲ. ನಮ್ಮ ದೇಶವಾಸಿಗಳನ್ನು ಅಪಾಯಕ್ಕೆ ದೂಡಿ, ವ್ಯಾಕ್ಸೀನ್ ರಫ್ತು ಮಾಡುತ್ತಿರುವುದು ಎಷ್ಟು ಸರಿ. ಕೇಂದ್ರ ಸರ್ಕಾರ ಪಕ್ಷಪಾತವಿಲ್ಲದೆ ಎಲ್ಲ ರಾಜ್ಯಗಳಿಗೆ ಸಹಾಯ ಮಾಡಬೇಕು. ನಾವೆಲ್ಲರೂ ಒಟ್ಟಾಗಿ ಈ ಸಾಂಕ್ರಾಮಿಕ ರೋಗವನ್ನು ಸೋಲಿಸಬೇಕು’ ಎಂದು ಟ್ವೀಟ್ ಮಾಡಿದ್ದಾರೆ.
ಪಾಕ್ ನಲ್ಲಿ ಕಿಡಿಗೇಡಿಗಳು ಧ್ವಂಸಗೊಳಿಸಿದ್ದ ಹಿಂದೂ ದೇಗುಲದ ಪುನರ್ ನಿರ್ಮಾಣಕ್ಕೆ 3.48 ಕೋಟಿ ರೂ. ಬಿಡುಗಡೆ..!








