ಕೊರೊನಾ ಸಮರ – ಲಾಕ್ ಡೌನ್ ಒಂದೇ ಪರಿಹಾರ : ರಾಹುಲ್ ಗಾಂಧಿ
ನವದೆಹಲಿ: ದೇಶದಲ್ಲಿ ಕೊರೊನಾ 2ನೇ ಅಲೆ ಹಿಂದೆಂದಿಗಿಂತಲೂ ಅತಿ ಭಯಾನಕ ಸ್ವರೂಪ ಪಡೆದಿದ್ದು, ಸೋಂಕಿತರ ಸಂಖ್ಯೆ ಸಾವಿನ ಸಂಖ್ಯೆ ದಿನೇ ದಿನೇ ಹೆಚ್ಚಾಗ್ತಿದೆ. ಮತ್ತೊಂದೆಡೆ ಬೆಡ್ ಕೊರತೆ ಆಕ್ಸಿಜನ್ ಕೊರತೆಯಿಂದಾಗಿ ಜನ ಸಾಯುತ್ತಿದ್ದಾರೆ. ಈ ನಡುವೆ ಕೇಂದ್ರ ಸರ್ಕಾರದ ವೈಫಲ್ಯದ ಬಗ್ಗೆ ವಿರೋಧ ಪಕ್ಷದ ನಾಯಕರುಕಟುವಾಗಿ ಟೀಕೆ ಮಾಡ್ತಿದ್ದಾರೆ.
ಈ ಹಿಂದೆ ಲಾಕ್ ಡೌನ್ ವಿರುದ್ಧ ಕಿಡಿಕಾರಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇದೀಗ ದೇಶದಲ್ಲಿ ಲಾಕ್ಡೌನ್ ಮಾಡುವುದು ಸೂಕ್ತ ಎಂದು ಟ್ವೀಟ್ ಮಾಡಿದ್ದಾರೆ. ಕೊವಿಡ್ ವಿರುದ್ಧ ಹೋರಾಡಲು ಲಾಕ್ ಡೌನ್ ಒಂದೇ ಅಸ್ತ್ರ. ನ್ಯಾಯ ಯೋಜನೆ ಜಾರಿ ಜೊತೆ ಲಾಕ್ ಡೌನ್ ಜಾರಿ ಮಾಡಿ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ಹಿಂದೆ ಕೋವಿಡ್ ಮೊದಲನೇ ಅಲೆ ಸಂದರ್ಭದಲ್ಲಿ ಲಾಕ್ ಡೌನ್ ಹೇರಿದ್ದಕ್ಕೆ, ವಿರೋಧಿಸಿ ರಾಹುಲ್ ಗಾಂಧಿ ಟ್ವೀಟ್ ಮೂಲಕ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದರು.








