Rahul Gandhi | ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಅಗ್ನಿಪಥ್ ಯೋಜನೆಗೆ ದೇಶದ ವಿವಿಧ ಮೂಲೆಗಳಲ್ಲಿ ವಿರೋಧ ವ್ಯಕ್ತವಾಗುತ್ತಿದೆ.
ಹೊಸ ಸೇನಾ ನೇಮಕಾತಿಯ ನೀತಿಯನ್ನು ಯುವಕರು ತಿರಸ್ಕರಿಸುತ್ತಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಸತತ 8 ವರ್ಷಗಳಿಂದ ಬಿಜೆಪಿ ಸರ್ಕಾರ ಜೈ ಜವಾನ್, ಜೈ ಕಿಸಾನ್ ಮೌಲ್ಯಗಳಿಗೆ ಅಪಮಾನ ಮಾಡಿದೆ.
ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ಹಿಂಪಡೆಯಬೇಕು ಎಂದು ಈ ಹಿಂದೆ ಹೇಳಿದ್ದೆ.
ಈಗಲೂ ಪ್ರಧಾನಿ ನರೇಂದ್ರ ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು.
ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.








