Puneeth Rajkumar: ಅಪ್ಪು ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ ರಾಹುಲ್ ಗಾಂಧಿ

1 min read
Rahul Gandhi Saaksha Tv

ಅಪ್ಪು ಮನೆಗೆ ಭೇಟಿ ನೀಡಿ, ಸಾಂತ್ವಾನ ಹೇಳಿದ ರಾಹುಲ್ ಗಾಂಧಿ

ಬೆಂಗಳೂರು: ಪವರಸ್ಟಾರ್ ಪುನಿತ್ ರಾಜಕುಮಾರ್ ಅಗಲಿ 5 ತಿಂಗಳು ಕಳೆದಿದ್ದು, ಶುಕ್ರವಾರ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಪುನಿತ್ ಅವರ ಮನೆಗೆ ಭೇಟಿ ನೀಡಿ ಪತ್ನಿ ಅಶ್ವಿನಿ ಪುನಿತ್ ರಾಜುಕುಮಾರ ಅವರಿಗೆ ಸಾಂತ್ವಾನ ಹೇಳಿದರು.

ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ 115ನೇ ಜಯಂತಿ ಕಾರ್ಯಕ್ರಮದ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದರು. ಶುಕ್ರವಾರ ತುಮಕೂರಿನ ಸಿದ್ಧಗಂಗಾ ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ, ರಾಹುಲ್ ಗಾಂಧಿ ಪುನೀತ್ ರಾಜ್‍ಕುಮಾರ್ ನಿವಾಸಕ್ಕೆ ಭೇಟಿ ನೀಡಿ ಅಪ್ಪು ಫೋಟೋಗೆ ನಮನ ಸಲ್ಲಿಸಿದ್ದಾರೆ.

Puneeth Rajkumar  Saaksha Tv

ಈ ವೇಳೆ ಪುನೀತ್ ರಾಜ್‍ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್‍ಕುಮಾರ್​ಗೆ ಧೈರ್ಯದ ಮಾತುಗಳನ್ನ ಹೇಳಿದ್ದಾರೆ. ಇದರ ಜೊತೆಗೆ ರಾಘವೇಂದ್ರ ರಾಜ್​​ಕುಮಾರ್​​ಗೂ ರಾಹುಲ್ ಗಾಂಧಿ ಸಮಾಧಾನದ ಮಾತುಗಳನ್ನ ಹೇಳಿದ್ದಾರೆ. ರಾಹುಲ್ ಗಾಂಧಿ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಎಂ.ಬಿ. ಪಾಟೀಲ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

ಈ ಕುತಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ “ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್ ಅವರ ನಿವಾಸದಲ್ಲಿ ಇಂದು ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಕುಟುಂಬವನ್ನು ಭೇಟಿ ಮಾಡಿ ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ. ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ” ಎಂದು ರಾಹುಲ್ ಗಾಂಧಿ ಸ್ಮರಿಸಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd