Rahul Gandhi : ದೆಹಲಿಯಲ್ಲಿ , ಮಾಜಿ ಪ್ರಧಾನಿಗಳ ಸ್ಮಾರಕಕ್ಕೆ ರಾಹುಲ್ ಗಾಂಧಿ ಭೇಟಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸೋಮವಾರ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ , ಮಹಾತ್ಮಾ ಗಾಂಧೀಜಿ , (ತಂದೆ) ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು..
ಮಾಜಿ ಪ್ರಧಾನಿ ಜವಾಹರಲಾಲ್ ನೆಹರು, ಶಕ್ತಿ ಸ್ಥಳದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ವೀರಭೂಮಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ರಾಹುಲ್ ಗಾಂಧಿ ಶ್ರದ್ಧಾಂಜಲಿ ಸಲ್ಲಿಸಿದರು.
ನಂತರ ಅವರು ರಾಜ್ ಘಾಟ್ ನಲ್ಲಿ ಮಹಾತ್ಮ ಗಾಂಧಿ ಮತ್ತು ವಿಜಯ್ ಘಾಟ್ ನಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ನಮನ ಸಲ್ಲಿಸಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.. ಇಂದು ವಾಜಪೇಯಿ ಅವರ ಜನ್ಮದಿನವಾಗಿದೆ..
ಇಂದು ಬೆಳಗ್ಗೆ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಗೂ ಮುನ್ನ ಮಹಾತ್ಮಾ ಗಾಂಧೀಜಿ, ಜವಾಹರಲಾಲ್ ನೆಹರು, ಲಾಲ್ ಬಹದ್ದೂರ್ ಶಾಸ್ತ್ರಿ, ಇಂದಿರಾ ಗಾಂಧಿ, ಚರಣ್ ಸಿಂಗ್, ರಾಜೀವ್ ಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಮತ್ತು ಜಗಜೀವನ್ ರಾಮ್ ಅವರ ಸಮಾಧಿಗಳಿಗೆ ಪುಷ್ಪ ನಮನ ಸಲ್ಲಿಸಿದರು.
ಇನ್ನೂ ವಿಶೇಷ ಅಂದ್ರೆ ಮಾಜಿ ಪ್ರಧಾನಿಗಳ ಸಮಾಧಿಗಳಿಗೆ ಪುಷ್ಪ ನಮನ ಸಲ್ಲಿಸುತ್ತಿರುವಾಗ ದೆಹಲಿಯ ಕೊರೆಯುವ ಚಳಿಯಲ್ಲಿ ಬೆಳ್ಳಂ ಬೆಳಿಗ್ಗೆ ರಾಹುಲ್ ಗಾಂಧಿ ಅವರು ಭೇಟಿ ನೀಡಿದ್ದಾರೆ.. ಅದೂ ಕೂಡ ಕೇವಲ ಟೀ ಶರ್ಟ್ನಲ್ಲಿ ಕಾಣಿಸಿಕೊಂಡಿದ್ದರು.. ಹೀಗಾಗಿ ಅವರ ಟೀ ಶರ್ಟ್ ವಿಚಾರವೇ ಇದೀಗ ಟ್ರೆಂಡಿಂಗ್ ಟಾಪಿಕ್ ಆಗಿದೆ..
Rahul Gandhi visits dehli memorials , saakshatv