ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಆಧುನಿಕ ರಾವಣ ಎಂಬ ಪೋಸ್ಟರ್ ನ್ನು ಬಿಜೆಪಿ ಬಿಡುಗಡೆ ಮಾಡಿದೆ.
ತನ್ನ ಎಕ್ಸ್ ಖಾತೆಯಲ್ಲಿ ಈ ಪೋಸ್ಟ್ ನ್ನು ಬಿಜೆಪಿ ಮಾಡಿದ್ದು, ಭಾರೀ ವಿವಾದಕ್ಕೆ ಕಾರಣವಾಗುತ್ತಿದೆ. ಪೋಸ್ಟರ್ನಲ್ಲಿ ಬಿಜೆಪಿ, ರಾವಣ, ಕಾಂಗ್ರೆಸ್ ಪಕ್ಷದ ನಿರ್ಮಾಣ, ಜಾರ್ಜ್ ಸೊರೊಸ್ ನಿರ್ದೇಶನ ಎಂದು ಬರೆಯಲಾಗಿದೆ. ಈ ಚಿತ್ರದಲ್ಲಿ ರಾಹುಲ್ ಗಾಂಧಿಗೆ ಹಲವು ತಲೆಗಳನ್ನು ಬಿಡಿಸಲಾಗಿದೆ. ರಾವಣನಂತೆ ರಕ್ಷಾಕವಚವನ್ನು ಧರಿಸಿರುವುದನ್ನು ತೋರಿಸಲಾಗಿದೆ. ಇದರ ಜೊತೆ ಹೊಸ ಯುಗದ ರಾವಣ ಬಂದಿದ್ದಾನೆ.
ಅವನು ದುಷ್ಟ, ಧರ್ಮ ವಿರೋಧಿ, ರಾಮನ ವಿರೋಧಿ ಮತ್ತು ಅವನ ಗುರಿ ಭಾರತ ನಾಶಮಾಡುವುದು ಎಂದು ಕೂಡ ಬಿಜೆಪಿ ಬರೆದುಕೊಂಡಿದೆ.
ಈ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ, ಬಿಜೆಪಿಯನ್ನು ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ಹಿಂಸಾಚಾರ ಪ್ರಚೋದಿಸುವ ಉದ್ದೇಶ ಈ ಬಿಜೆಪಿಗಿದ್ದು, ಅದಕ್ಕೆ ಈ ರೀತಿ ಮಾಡಿದ್ದಾರೆ ಎಂದು ಹೇಳಿದ್ದಾರೆ.