ರಾಹುಲ್ ಔಟ್… ಟೀಂ ಇಂಡಿಯಾದ ಆರಂಭಿಕರು ಯಾರು..?
ಕಾನ್ಪುರ್ : ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಿಂದ ಕನ್ನಡಿಗ ಕೆ.ಎಲ್.ರಾಹುಲ್ ಔಟ್ ಆಗಿದ್ದು, ಕಿವೀಸ್ ವಿರುದ್ಧ ಆರಂಭಿಕರಾಗಿ ಯಾರು ಕಣಕ್ಕಿಳಿಯಲಿದ್ದಾರೆ ಅನ್ನೋ ಪ್ರಶ್ನೆಯನ್ನ ಹುಟ್ಟು ಹಾಕಿದೆ.
ಯಾಕಂದರೇ ಕೆ.ಎಲ್.ರಾಹುಲ್ ಕಳೆದ ಕೆಲ ವರ್ಷಗಳಿಂದ ಟೀಂ ಇಂಡಿಯಾದ ಓಪನರ್ ಆಗಿ ಅದ್ಭುತವಾದ ಪ್ರದರ್ಶನ ನೀಡುತ್ತಿದ್ದಾರೆ.
ಟಿ20 ವಿಶ್ವಕಪ್ ಸೇರಿದಂತೆ ಇತ್ತೀಚೆಗೆ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರು ಮ್ಯಾಚ್ ಗಳ ಟಿ 20 ಸರಣಿಯಲ್ಲೂ ರಾಹುಲ್ ಟೀಂ ಇಂಡಿಯಾ ಪರ ಅಬ್ಬರಿಸಿದ್ದರು.
ಕಿವೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲೂ ಅವರೇ ಓಪನ್ ಮಾಡುವ ಸಾಧ್ಯತೆಗಳಿದ್ದವು.
ಆದ್ರೆ ಇದೀಗ ಅವರು ಎಡಗಾಲಿನ ಸ್ನಾಯು ಸೆಳೆತಕ್ಕೆ ಒಳಗಾಗಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದಾರೆ.
ರಾಹುಲ್ ಸರಣಿಯಿಂದ ಔಟ್ ಆಗಿರುವ ಹಿನ್ನೆಲೆಯಲ್ಲಿ ಕನ್ನಡಿಗ ಮಯಾಂಕ್ ಅಗರ್ ವಾಲ್ ಜೊತೆಗೆ ಶುಬ್ ಮನ್ ಗಿಲ್ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆಗಳಿವೆ.
ಇನ್ನು ರಾಹುಲ್ ಬದಲಾಗಿ ಸೂರ್ಯಕುಮಾರ್ ಯಾದವ್ ಅವರು ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
ಅವರು ವಿರಾಟ್ ಕೊಹ್ಲಿಯ ಸ್ಥಾನದಲ್ಲಿ ಆಡುವ ಸಾಧ್ಯತೆಗಳಿವೆ.
ವಿರಾಟ್ ಕೊಹ್ಲಿ ಸದ್ಯ ವಿಶ್ರಾಂತಿಯಲ್ಲಿದ್ದು, ಕಿವೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಅವರು ವಾಪಸ್ ಆಗಲಿದ್ದಾರೆ.









