ಮಾನನಷ್ಟ ಮೊಕದ್ದಮೆಯೊಂದರಲ್ಲಿ ದೋಷಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಸಂಸದ ಸ್ಥಾನ ಕಳೆದುಕೊಂಡಿರುವ ರಾಹುಲ್ ಗಾಂಧಿ ಅವರು ಗುಜರಾತ್ ಹೈಕೋರ್ಟ್ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ.
ಈ ಪ್ರಕರಣದ ಕುರಿತು ರಾಹುಲ್ ಗಾಂಧಿ ಸದ್ಯ ಮೇಲ್ಮನವಿ ಸಲ್ಲಿಸಲಿದ್ದಾರೆ. ಮಾರ್ಚ್ 24 ರಂದು ಸೂರತ್ ನ್ಯಾಯಾಲಯವು ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿಯನ್ನು ದೋಷಿ ಎಂದು ಘೋಷಿಸಿತ್ತು. ಅಲ್ಲದೇ, ಅವರಿಗೆ 2 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅದಾದ ನಂತರ ಅವರ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲಾಗಿತ್ತು.
ಅದೇ ಸಮಯದಲ್ಲಿ 11 ದಿನಗಳ ನಂತರ ರಾಹುಲ್ ಗಾಂಧಿ ಸೂರತ್ ಸೆಷನ್ಸ್ ನ್ಯಾಯಾಲಯದ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಲಿದ್ದಾರೆ. ರಾಹುಲ್ ಗಾಂಧಿಯವರ ಕಾನೂನು ತಂಡ ಏಪ್ರಿಲ್ 3 ರಂದು ಅಂದರೆ ಸೋಮವಾರ ನ್ಯಾಯಾಲಯದ ಮೊರೆ ಹೋಗಲಿದೆ.








