ರಾಯಚೂರಿನಲ್ಲಿ ಕರಿಮಾರಿಯ ಅಬ್ಬರ : ನಾಲ್ಕು ಮಂದಿ ಸಾವು
ರಾಯಚೂರು : ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಸದ್ಯ ಜಿಲ್ಲೆಯಲ್ಲಿ 31 ಪ್ರಕರಣಗಳು ದಾಖಲಾಗಿದ್ದು, ಇದುವರೆಗೆ ನಾಲ್ಕು ಜನ ಸೋಂಕಿತರು ಕೊನೆಯುಸಿರೆಳೆದಿದ್ದಾರೆ.
ಸದ್ಯ 23 ಜನ ಸೋಂಕಿತರು ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಯಲ್ಲಿ ವಿಶೇಷ ವಾರ್ಡ್ ನ್ನು ಆರಂಭ ಮಾಡಲಾಗಿದೆ.
ಇದರಲ್ಲಿ 28 ಹಾಸಿಗೆಗಳಿವೆ. 11 ಜನ ನುರಿತ ಇ.ಎನ್.ಟಿ ವೈದ್ಯರ ತಂಡ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದೆ.
ಆದ್ರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಪ್ರಕರಣಗಳ ಬಗ್ಗೆ ಜಿಲ್ಲಾಡಳಿತ ಮಾಹಿತಿ ನೀಡಿಲ್ಲ ಎಂದು ತಿಳಿದುಬಂದಿದೆ.