Raichur | ಭಾರಿ ಮಳೆಗೆ ಕುಸಿದ ಮನೆಗಳು
ರಾಯಚೂರು : ರಾಜ್ಯದಾದ್ಯಂತ ಮಳೆರಾಯನ ಅಬ್ಬರ ಜೋರಾಗಿದ್ದು, ನಾನಾ ಅವಾಂತರಗಳು ಸೃಷ್ಠಿಯಾಗುತ್ತಿವೆ.
ಅದರಂತೆ ರಾಯಚೂರು ಜಿಲ್ಲೆಯಾದ್ಯಂತ ವರುಣ ಆರ್ಭಟ ಮುಂದುವರೆದಿದ್ದು, ಮಸ್ಕಿಯ ಬೆಳ್ಳಿಗನೂರ ಗ್ರಾಮದಲ್ಲಿ ಮಳೆಯಿಂದ ಮನೆಗಳು ಕುಸಿದಿವೆ.
ಧಾರಾಕಾರ ಮಳೆ ಬೆಳ್ಳಿಗನೂರ ಗ್ರಾಮದಲ್ಲಿ ನಾಲ್ಕು ಮನೆಗಳು ಕುಸಿದಿದ್ದು, ಸ್ಥಳಕ್ಕೆ ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್ ಪರಿಶೀಲನೆ ನಡೆಸಿದ್ದಾರೆ.

ಅಲ್ಲದೇ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.
ಇನ್ನು ಅಪಾರ ಮಳೆಯಿಂದಾಗಿ ಗ್ರಾಮದ ಹಲವು ಮನೆಗಳಿಗೆ ನೀರು ನುಗ್ಗಿದೆ.
ಮಸ್ಕಿಯ ಹಳ್ಳಕೊಳ್ಳಗಳು ಭರ್ತಿಯಾಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ.
ಮಳೆಯಿಂದ ಬೆಳೆ ಕಳೆದುಕೊಂಡಿರುವ ರೈತರು ಕಂಗಾಲಾಗಿದ್ದಾರೆ.








