ಕೃಷ್ಣಯೇ ನೀರಿನ ರಭಸಕ್ಕೆ ಲಕ್ಷ ಶೀಲಹಳ್ಳಿ ಸೇತುವೆ ಮುಳುಗಡೆ
ರಾಯಚೂರು: ಕಳೆದ ಎರಡು ಮೂರು ದಿನಗಳಿಂದ ಮಹಾರಾಷ್ಟ್ರದಲ್ಲಿ ಭರ್ಜರಿ ಮಳೆಯಾಗುತ್ತಿರೋ ಹಿನ್ನೆಲೆ ನಾರಾಯಣಪುರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಹೀಗಾಗಿ ಜಲಾಶಯದಿಂದ ಕೃಷ್ಣ ನದಿಗೆ 1 ಲಕ್ಷ 85 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.
ನದಿ ನೀರು ತುಂಬಿ ಹರಿದ ಪರಿಣಾಮ ಲಿಂಗಸೂಗೂರು ತಾಲೂಕಿನ ಶೀಲಹಳ್ಳಿ ಹಂಚಿನಾಳ ಸೇತುವೆ ಮುಳುಗಡೆಯಾಗಿದೆ. ಇದರಿಂದ ಲಿಂಗಸೂಗೂರು ಹಾಗೂ ಶೀಲಹಳ್ಳಿ ನಡುವೆ ಸಂಪರ್ಕ ಕಡಿತಗೊಂಡಿದೆ. ಜೊತೆಗೆ ನದಿ ಪಾತ್ರದ ಜಮೀನುಗಳಿಗೆ ನೀರು ನುಗ್ಗಿದೆ…ಜನ ಜಾನುವಾರುಗಳಿಗೆ ಯಾವುದೇ ರೀತಿಯ ಚಟುವಟಿಕೆಗಳನ್ನು ನಡೆಸದಂತೆ ಜಿಲ್ಲಾಡಳಿತ ಎಚ್ಚರಿಕೆ ಆದೇಶ ಹೊರಡಿಸಿದೆ.









