Raichur | ಭದ್ರಾ ಜಲಾಶಯದಿಂದ ನೀರು ಬಿಡುಗಡೆ.. ರಾಯರ ಏಕಶಿಲಾ ಬೃಂದಾವನ ಜಲಾವೃತ
ರಾಯಚೂರು : ರಾಜ್ಯದ ಮಂಡ್ಯ ಕಲಬುರಗಿ, ಯಾದಗಿರಿ, ವಿಜಯಪುರ, ಕೊಡಗು, ಚಿಕ್ಕಮಗಳೂರು, ಬೆಳಗಾವಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ದೇಗುಲ, ಮಂಟಪಗಳು ಮುಳುಗಡೆಯಾಗಿವೆ.
ಈ ನಡುವೆ ಮುಂದಿನ 48 ಗಂಟೆಗಳಲ್ಲಿ ಕಲಬುರ್ಗಿ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇತ್ತ ಮಲೆನಾಡಿನಲ್ಲಿ ನಿರಂತರವಾಗಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರ ಜಲಾಶಯಕ್ಕೆ ಸಾಕಷ್ಟು ಪ್ರಮಾಣದ ನೀರು ಹರಿದು ಬರುತ್ತಿದೆ.
ಹೀಗಾಗಿ ತುಂಗಭದ್ರ ಜಲಾಶಯದಿಂದ ಒಂದೂವರೆ 1.5 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ಪರಿಣಾಮ ನದಿ ತೀರದ ಎಲೆಬಿಚ್ಚಾಲಿ ಗ್ರಾಮದ ಜಪದ ಕಟ್ಟೆ ಸುತ್ತ ಬಂದ ನೀರು ಆವರಿಸಿದೆ. ತುಂಗಭದ್ರಾ ಜಲಾಶಯ ನೀರಿನಿಂದ ರಾಯರ ಏಕಶಿಲಾ ಬೃಂದಾವನ ಜಲಾವೃತಗೊಂಡಿದೆ.