ನಾಳೆ ಮಾರ್ಚ್ 7 ರಂದು ರಾಯಚೂರು ನಗರ ಬಂದ್ ಗೆ ಕರೆ ನೀಡಲಾಗಿದೆ. ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ನೇತೃತ್ವದಲ್ಲಿ ಬಂದ್ ಆಗಲಿದೆ.
ನವೋದಯ ಶಿಕ್ಷಣ ಸಂಸ್ಥೆ ನಿಲುವಿನ ವಿರುದ್ದ ವಿವಿಧ ಸಂಘಟನೆಗಳಿಂದ ಹೋರಾಟ ನಡೆಯಲಿದೆ. ಸಂಸ್ಥೆಗೆ ಕಲಂ 371 ಜೆ ಅನ್ವಯಿಸದಂತೆ ಕೋರ್ಟ್ ಮೊರೆ ಹೋದ ಹಿನ್ನೆಲೆ ಬಂದ್ ಮಾಡಲಾಗ್ತಿದೆ..
ಮೆಡಿಕಲ್ ಸೀಟ್ ಹಂಚಿಕೆಯಲ್ಲಿ ವಿದ್ಯಾರ್ಥಿಗಳಿಗೆ ಅನ್ಯಾಯ ಆರೋಪವಿದ್ದು , ಈ ವರ್ಷ 106 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟ್ ಕೈ ತಪ್ಪುತ್ತಿತ್ತು , ಮೊದಲೇ ಸೀಟ್ ಹಂಚಿಕೆ ಹಿನ್ನೆಲೆ ಕಲಂ 371 ಜೆ ಅಡಿ ಸೀಟ್ ಕೊಟ್ಟಿದ್ದಾರೆ..
ಮುಂದಿನ ವರ್ಷ ವಿಶೇಷ ಸ್ಥಾನಮಾನದ ಅಡಿ ಮೆಡಿಕಲ್ ಸೀಟ್ ನೀಡದಿರಲು ಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ವಾಪಸ್ ಪಡೆಯುವಂತೆ ಆಗ್ರಹಿಸಿ ರಾಯಚೂರು ಬಂದ್ ಗೆ ಕರೆ ನೀಡಲಾಗಿದೆ. ಎಲ್ಲಾ ಪ್ರಮುಖ ರಾಜಕೀಯ ಪಕ್ಷ ಹಾಗೂ ವಿವಿಧ ಸಂಘಟನೆಗಳಿಂದ ಬಂದ್ ಗೆ ಕರೆ ಕೊಡಲಾಗಿದೆ.