ಮುಂಬೈ : ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯಲ್ಲಿ ಸಂಭವಿಸಿದ ಕಟ್ಟಡ ಕುಸಿತ ದುರಂತದಲ್ಲಿ ಮೃತಮಟ್ಟವರ ಸಂಖ್ಯೆ 15ಕ್ಕೆ ತಲುಪಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಕಾಣೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದೆ. ಆಗಸ್ಟ್ 24 ರಂದು ಮಹಾರಾಷ್ಟ್ರದ ರಾಯಗಡ್ ಜಿಲ್ಲೆಯ ಮಹಾದ್ ನ ವಸತಿ ಪ್ರದೇಶದಲ್ಲಿ ಐದು ಅಂತಸ್ತಿನ ಕಟ್ಟಡ ಕುಸಿದಿದ್ದು, 19 ಮಂದಿ ನಾಪತ್ತೆಯಾಗಿದ್ದಾರೆ. ಕುಸಿತದ ವೇಳೆ ವ್ಯಕ್ತಿಯೊಬ್ಬ ಹೃದಯ ಸ್ತಂಭನದಿಂದ ಸಾವನ್ನಪ್ಪಿದ್ದರು.
ಅವಶೇಷಗಳಡಿ ಸಿಲುಕಿರುವವರ ಹೊರೆತೆಗೆಯುವ ಕಾರ್ಯ ಮುಂದುವರೆದಿದ್ದು, ಇಂದು ಬೆಳಗ್ಗೆ 15 ಮಂದಿ ಸಾವನ್ನಪ್ಪಿದ್ದಾರೆ. ಬದುಕುಳಿದವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಮಹಾರಾಷ್ಟ್ರ ಸರ್ಕಾರ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ. ಘಟನೆ ಸಂಬಂಧ ಸೆಕ್ಷನ್ 304, 304ಎ, 337, 338 ಮತ್ತು ಭಾರತೀಯ ದಂಡ ಸಂಹಿತೆ 34ರಡಿ ಪ್ರಕರಣ ದಾಖಲಿಸಿಕೊಂಡು ಪೆÇಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.









