ರೈಲ್ ರೋಕೊ ಚಳವಳಿ : ಬೀದರ್ ನಲ್ಲಿ ರೈತರ ಬೆಂಬಲ
ಬೀದರ್ : ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಪ್ರತಿಭಟನೆಗಳನ್ನು ನಡೆಸುತ್ತಲೇ ಇದ್ದಾರೆ. ಪ್ರತಿ ದಿನ ಒಂದಲ್ಲಾ ಒಂದು ವಿಭಿನ್ನ ಪ್ರತಿಭಟನೆ ನಡೆಸುವ ಮೂಲಕ ರೈತರು ಕೇಂದ್ರ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಅದರಂತೆ ಇಂದು ಸಂಯುಕ್ತ ಕಿಸಾನ್ ಮೋರ್ಚಾ ರೈಲ್ ರೋಕೊ ಚಳವಳಿಗೆ ಕರೆ ಕೊಟ್ಟಿದ್ದು, ಇದಕ್ಕೆ ರಾಜ್ಯದಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ.
ಇದನ್ನೂ ಓದಿ : ರೈಲು ತಡೆ ಚಳವಳಿ : ರಾಜ್ಯದಲ್ಲಿ ಪ್ರತಿಭಟನೆ ಜೋರು
ಬೀದರ್ ನಲ್ಲಿ ರೈತರು ರೈಲ್ ರೋಕೊ ಚಳವಳಿಗೆ ಭಾರಿ ಬೆಂಬಲ ವ್ಯಕ್ತಪಡಿಸಿದ್ದಾರೆ. ರೈಲ್ ರೋಕೊ ಚಳವಳಿ ಹಿನ್ನೆಲೆ ಬೀದರ್ ರೈಲ್ವೆ ನಿಲ್ದಾಣದ ಮುಂಭಾಗ ಜಮಾಯಿಸಿದ ರೈತರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನು ಕೂಗಿದರು. ಅಲ್ಲದೆ ಬೀದರ್- ಬೆಂಗಳೂರು ರೈಲು ತಡೆಯಲು ಮುಂದಾದರು. ಈ ವೇಳೆ ರೈತರನ್ನು ಪೊಲೀಸರು ತಡೆದರು. ನಿಲ್ದಾಣಕ್ಕೆ ನುಗ್ಗಲು ಹೋದವರನ್ನ ತಡೆದ ಪೊಲೀಸರ ವಿರುದ್ಧ ರೈತರು ಘೋಷಣೆ ಕೂಗುತ್ತಾ ಆಕ್ರೋಶ ಹೊರಹಾಕಿದರು.
ಇದಲ್ಲದೇ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ರೈತ ಚಳುವಳಿಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರಗಳನ್ನ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ.