ರೈಲು ತಡೆ ಚಳವಳಿ : ರಾಜ್ಯದಲ್ಲಿ ಪ್ರತಿಭಟನೆ ಜೋರು
ಬೆಂಗಳೂರು : ಕೇಂದ್ರ ಸರ್ಕಾರದ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತ ಸಂಘಟನೆಗಳು ದೇಶದಾದ್ಯಂತ ರೈಲು ತಡೆ ಚಳವಳಿ ಹಮ್ಮಿಕೊಂಡಿದ್ದು, ರಾಜ್ಯದಲ್ಲಿ ಪ್ರತಿಭಟನೆಯ ಕಾವು ಜೋರಾಗಿದೆ.
ಇಂದು ರೈಲ್ ರೋಕೋ ಚಳವಳಿಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆಕೊಟ್ಟಿದ್ದು, ರಾಜ್ಯದಾದ್ಯಂತ ರೈತರು ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಹುಬ್ಬಳ್ಳಿ, ಬೆಳಗಾವಿ, ಬೀದರ್, ಬೆಂಗಳೂರಿನ ಯಶವಂತಪುರ, ರಾಯಚೂರು, ಯಾದಗಿರಿ, ಧಾರವಾಡ ಸೇರಿದಂತೆ ಹಲವು ರೈಲ್ವೆ ನಿಲ್ದಾಣಕ್ಕೆ ರೈತರು ಮುತ್ತಿಗೆ ಹಾಕಿದ್ದಾರೆ.
ಇದನ್ನೂ ಓದಿ : ಟಿಕ್ ಟಿಕ್ ಕೌಂಡೌನ್ ಶುರು : ಮಾರ್ಚ್ 21ಕ್ಕೆ `ಹುಲಿಯಾ ಕಹಳೆ’
ಇನ್ನು ರೈತರ ರೈಲ್ ರೋಕೋ ಚಳವಳಿಗೆ ಪೊಲೀಸರು ಅಡ್ಡಿಪಡಿಸಿದ್ದು, ರೈಲು ತಡೆ ಯತ್ನಕ್ಕೆ ಅಡ್ಡಬಂದ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ರೈತರನ್ನು ತಡೆಯಲೆಂದು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕಿತ್ತೆಸೆದು ರೈತರು ರೈಲು ನಿಲ್ದಾಣಕ್ಕೆ ನುಗ್ಗಿದ್ದು, ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.