ಮಡಿಕೇರಿ: ಕೊಡಗಿನ ಜನತೆಯ ಹಲವು ದಶಕಗಳ ಕನಸಾದ ರೈಲ್ವೆ ಸಂಪರ್ಕ ಕಲ್ಪಿಸಲು ಕೊನೆಗೂ ಕಾಲ ಕೂಡಿ ಬಂದಿದೆ. ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564
ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್)call/WhatsApp 8548998564
ನೂತನ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಅಂತಿಮವಾಗಿ ಸ್ಥಳ ವೀಕ್ಷಣೆ ಮಾಡಿ ವರದಿ ನೀಡುವಂತೆ, ಮೈಸೂರು ರೈಲ್ವೆ ಅಧಿಕಾರಿಗಳಿಗೆ ದೆಹಲಿಯ ಭಾರತೀಯ ರೈಲ್ವೆ ಮಂಡಳಿ ಸೂಚನೆ ನೀಡಿದೆ. ಈ ಉದ್ದೇಶಿತ ಮೈಸೂರು ಹಾಗೂ ಕುಶಾಲನಗರ ನಡುವಿನ 87 ಕಿ.ಮೀ ಉದ್ದದ ರೈಲು ಮಾರ್ಗಕ್ಕೆ 1854.62 ಕೋಟಿ ರುಪಾಯಿ ವೆಚ್ಚ ಆಗಲಿರುವುದಾಗಿ ರೈಲ್ವೆ ಇಲಾಖೆ ಅಂದಾಜು ಪಟ್ಟಿಯನ್ನೂ ಸಿದ್ಧಪಡಿಸಿದೆ.

ಪ್ರಸ್ತುತ ರೈಲು ಮಾರ್ಗ ನಿರ್ಮಾಣಕ್ಕೆ ಕಳೆದ ವರ್ಷ ಫೆಬ್ರವರಿ 2019ರಂದು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿತ್ತು. ನಂತರ ರೈಲ್ವೆ ಮಾರ್ಗ ನಿರ್ಮಾಣಕ್ಕೆ ರೈಲ್ವೇ ಅಧಿಕಾರಿಗಳು ಸರ್ವೆಯನ್ನೂ ನಡೆಸಿದರು. ನಂತರ ಈ ಯೋಜನೆಯು ವ್ಯವಹಾರಿಕವಾಗಿ ಲಾಭದಾಯಕವಲ್ಲ ಎಂದು ಅಧಿಕಾರಿಗಳು ವರದಿ ಸಲ್ಲಿಸಿದ್ದರಿಂದ ಯೋಜನೆಯೇ ನೆನೆಗುದಿಗೆ ಬಿದ್ದಿತ್ತು. ಇದೀಗ ಎರಡು ಜಿಲ್ಲೆಗಳ ನಡುವಿನ ರೈಲು ಸಂಚಾರ ಆರಂಭಕ್ಕೆ ಕೊನೆಯ ಹಂತದ ಸರ್ವೆ ಮಾಡಲು ಕ್ಷಣಗಣನೆ ಆರಂಭವಾಗಿದೆ.
ಪರಿಸರವಾದಿಗಳ ವಿರೋಧದ ನಡುವೆಯೂ ರೈಲು ಮಾರ್ಗ ಪೂರ್ಣಗೊಂಡರೆ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ಬೈಲುಕುಪ್ಪೆ ಹಾಗೂ ಕುಶಾಲನಗರದ ಜನರಿಗೆ ಅನುಕೂಲವಾಗಲಿದೆ.
ಮೈಸೂರು-ಕುಶಾಲನಗರ ರೈಲು ಮಾರ್ಗ ನಿರ್ಮಾಣಕ್ಕೆ ಈ ಹಿಂದೆಯೇ ಸಮೀಕ್ಷೆ ನಡೆಸಲಾಗಿತ್ತು. ಆದರೆ ಅಧಿಕ ಪ್ರಮಾಣದ ಅರಣ್ಯಕ್ಕೆ ಹಾನಿಯಾಗುವ ಉದ್ದೇಶದಿಂದ ಕೊಡಗಿನಲ್ಲಿ ರೈಲ್ವೆ ಮಾರ್ಗ ನಿರ್ಮಾಣ ಮಾಡಲು ಪರಿಸರವಾದಿಗಳು ವಿರೋಧ ವ್ಯಕ್ತಪಡಿಸಿದ್ದರು. ಮುಂದಿನ 6 ತಿಂಗಳಲ್ಲಿ ಸರ್ವೇ ಕೆಲಸ ಮುಗಿದು ಕಾಮಗಾರಿ ಆರಂಭವಾಗಲಿದೆ ಎಂದು ರೈಲ್ವೇ ವಿಭಾಗೀಯ ನಿರ್ವಾಹಕ ಸತ್ಯನಾರಾಯಣ ತಿಳಿಸಿದ್ದಾರೆ.
ಅಂತಿಮ ಸರ್ವೆ ನಡೆಸಲು ರೈಲ್ವೇ ಮಂಡಳಿ ಆದೇಶ ನೀಡಿದ್ದು, ಯೋಜನಾ ವರದಿಯನ್ನು (ಡಿಪಿಆರ್) ಸಿದ್ಧಪಡಿಸಿ ದೆಹಲಿಯ ರೈಲ್ವೆ ಮಂಡಳಿಗೆ ಸಲ್ಲಿಸಲಾಗುವುದು. ರೈಲ್ವೆ ಮಂಡಳಿಯು ಬಜೆಟ್ನಲ್ಲಿ ಹಣ ಬಿಡುಗಡೆ ಮಾಡಿದ ನಂತರ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.
`ಎಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..? ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಪರಿಹಾರ ಶತಸಿದ್ಧ.ವಿದ್ವಾನ್ ಶ್ರೀ ಜ್ಞಾನೇಶ್ವರ್ ರಾವ್ ಕರೆ ಮಾಡಿ 8548998564.’
ಪ್ರವಾಸೋದ್ಯಮಕ್ಕೆ ಉತ್ತೇಜನ ಮೈಸೂರಿನಲ್ಲಿ ಈಗಾಗಲೇ ಅನೇಕ ನಗರಗಳಿಗೆ ವಿಮಾನ ಸಂಚಾರ ಆರಂಭಿಸಿದ್ದು, ಪ್ರಯಾಣಿಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕಳೆದ ಸೋಮವಾರದಿಂದ ನಾಲ್ಕು ಪ್ಯಾಸೆಂಜರ್ ರೈಲುಗಳನ್ನೂ ಬೆಂಗಳೂರಿಗೆ ಆರಂಭಿಸಲಾಗಿದ್ದು, ಇದಕ್ಕೆ ರಿಸರ್ವೇಷನ್ ಇಲ್ಲ. ಹೀಗಾಗಿ ಮೈಸೂರು ಜಿಲ್ಲೆಗೆ ಹಲವು ಜಿಲ್ಲೆಗಳ ಸಾರಿಗೆ ಸಂಪರ್ಕ ಹೆಚ್ಚಾಗುವುದರಿಂದ ಮೈಸೂರು ಹಾಗೂ ಕೊಡಗು ಪ್ರವಾಸೋದ್ಯಮ ಉತ್ತೇಜನಗೊಳ್ಳಲಿದೆ.
ಕೊಂಪುಳೀರ ಗಿರಿಧರ್
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








