Railway Department: ಚಾರ್ ಧಾಮ್ ಯಾತ್ರಾತಿಗಳಿಗೆ ಸಿಹಿ ಸುದ್ದಿ ನೀಡಿದ ರೇಲ್ವೆ ಇಲಾಖೆ

1 min read
Kedarnath Saaksha Tv

ಚಾರ್ ಧಾಮ್ ಯಾತ್ರಾತಿಗಳಿಗೆ ಸಿಹಿ ಸುದ್ದಿ ನೀಡಿದ ರೇಲ್ವೆ ಇಲಾಖೆ

ನವದೆಹಲಿ: ರೇಲ್ವೆ ಇಲಾಖೆ ಚಾರ್ ಧಾಮ್ ಯಾತ್ರಾತಿಗಳಿಗೆ ಸಿಹಿ ಸುದ್ದಿ ನೀಡಿದ್ದು, ಮೇ ತಿಂಗಳಲ್ಲಿ ಚಾರ್ ಧಾಮ್ ಯಾತ್ರೆ ಕೈಗೊಳ್ಳುವರಿಗೆ ವಿಷೇಶ ರಿಯಾಯ್ತಿಯನ್ನು ಘೋಷಿಸಿದೆ. ಇದು ಹಲವು ಅಗತ್ಯ ಸೌಲಭ್ಯಗಳಿರುವ ಟೂರ್ ಪ್ಯಾಕೇಜ್ ಇದಾಗಿದೆ.

ಹರಿದ್ವಾರ, ಬಾರ್‍ಕೊಟ್, ಜಾನಕಿಚಟ್ಟಿ, ಯಮುನೋತ್ರಿ, ಉತ್ತರಕಾಶಿ, ಗಂಗೋತ್ರಿ, ಗುಪ್ತಕಾಶಿ, ಸನ್‍ಪ್ರಯಾಗ, ಕೇದಾರನಾಥ, ಬದರಿನಾಥ ಕ್ಷೇತ್ರಗಳಿಗೆ ಹೋಗುವ ಯಾತ್ರಾತಿಗಳಿಗೆ ನಾಗಪುರ ಮತ್ತು ದೆಹಲಿ ಮಾರ್ಗವಾಗಿ ವಾಯುಯಾನ ಟಿಕೆಟ್‍ಗಳನ್ನೂ ಈ ಪ್ಯಾಕೇಜ್ ಒಳಗೊಂಡಿರುತ್ತದೆ.

ಭಾರತ ಸರ್ಕಾರದ ಆಜಾದಿ ಕ ಅಮೃತ್ ಮಹೋತ್ಸವ್ ಮತ್ತು ದೇಖೋ ಆಪ್ನಾ ದೇಶ್ ಉಪಕ್ರಮಗಳ ಭಾಗವಾಗಿ ಐಆರ್​ಸಿಟಿಸಿ ಈ ಯೋಜನೆಯನ್ನು ಪರಚಯಿಸಿದೆ. ಈ ವರ್ಷ ಕೊರೊನಾ ಪ್ರಕರಣಗಳು ಕಡಿಮೆಯಾಗಿರುವುದರಿಂದ ಸಾಕಷ್ಟು ಜನರು ಈ ಸೌಲಭ್ಯ ಪಡೆದುಕೊಳ್ಳಬಹುದು. ಮೇ 14ರಿಂದ ಆರಂಭವಾಗಿ ಮೇ 25ಕ್ಕೆ ಮುಕ್ತಾಯವಾಗಲಿರುವ ಈ ಯಾತ್ರೆಯು 12 ಹಗಲು ಮತ್ತು 11 ರಾತ್ರಿಗಳ ಪ್ರವಾಸ ಪ್ಯಾಕೇಜ್ ಹೊಂದಿರುತ್ತದೆ.

ಈ ಪ್ರಯಾಣಕ್ಕೆ ಒಬ್ಬರಿಗೆ 77,600 ಮತ್ತು ಇಬ್ಬರಿಗೆ 61,400 ಶುಲ್ಕ ನಿಗದಿಪಡಿಸಲಾಗಿದೆ. ಈ ಶುಲ್ಕವು ಪ್ರಯಾಣದರದೊಂದಿಗೆ ವಸತಿ, ಊಟೋಪಚಾರ ವೆಚ್ಚಗಳನ್ನೂ ಒಳಗೊಂದಿದೆ. ಹೆಚ್ಚಿನ ಮಾಹಿತಿಗೆ  www.irctctourism.com ಜಾಲತಾಣ ನೋಡಿ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd