ಖಾಲಿ ಹುದ್ದೆಗಳಿಗೆ ಅರ್ಜಿ | ಹರದಾಡುತ್ತಿರುವ ನಕಲಿ ಅಧಿಸೂಚನೆ | ಇಲಾಖೆಯಿಂದ ಎಚ್ಚರಿಕೆ
ಹುಬ್ಬಳ್ಳಿ: ನೈರುತ್ಯ ರೇಲ್ವೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂಬ ನಕಲಿ ಅಧಿಸೂಚನೆ ಎಲ್ಲಡೆ ಹರದಾಡುತ್ತಿರುವುದು ಬೆಳಕಿಗೆ ಬಂದಿದೆ.
ನೈರುತ್ಯ ರೈಲ್ವೆ ವಲಯದ ಜಿಎಂ ವ್ಯಾಪ್ತಿಯಲ್ಲಿ (ಮಹಾಪ್ರಬಂಧಕರು) ಕೋಟಾದಡಿ ಟೆಕ್ನಿಕಲ್ ಹಾಗೂ ನಾನ್ ಟೆಕ್ನಿಕಲ್ 2,800 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯನ್ನು ಸಾರ್ವಜನಿಕವಾಗಿ ಮಾಡಬಾರದು ಎಂದು ಖಚಿತಪಡಿಸಿಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ರೀತಿಯ ಹಲವಾರು ನಿಯಮಗಳನ್ನು ಸೇರಿದಂತೆ ವಿವಿಧ ಸೂಚನೆಗಳುಳ್ಳ ಪತ್ರ ಇದೀಗ ಎಲ್ಲೆಡೆ ಹರಿದಾಡುತ್ತಿವೆ.
ಇಲಾಖೆಯಲ್ಲಿ ಕೆಲಸ ಕೊಡಿಸುತ್ತೇವೆಂದು ನಂಬಿಸಿ ಮೋಸ ಮಾಡುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಇಂಥವರಿಂದ ಹುಷಾರಾಗಿರಿ ಎಂದು ಎಚ್ಚರಿಕೆ ನೀಡಲಾಗಿದೆ. ಜೊತೆಗೆ, ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಜಾಗೃತಿ ಉಂಟುಮಾಡುವ ಕೆಲಸವನ್ನು ರೈಲ್ವೆ ಇಲಾಖೆ ಮಾಡುತ್ತಿದೆ.
ಜಿಎಂ ಕೋಟಾದಡಿ ಹೊರಡಿಸಿರುವ ನೋಟಿಫಿಕೇಶನ್ ಜಿಎಂ ಸಹಿ ಹಾಗೂ ಸೀಲುಗಳನ್ನ ಸಹ ನಕಲು ಮಾಡಲಾಗಿದೆ. ಆದರೆ ಈ ರೀತಿ ಪತ್ರ, ನೋಟಿಫಿಕೇಶನ್ಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ನಿರುದ್ಯೋಗಿಗಳನ್ನು ನಂಬಿಸಿ ದುಡ್ಡು ವಸೂಲಿ ಮಾಡುವ ಜಾಲ ಇದರ ಹಿಂದೆ ಇದೆ. ಹೀಗಾಗಿ ಇದನ್ನು ಯಾರೂ ನಂಬಬಾರದು ಎಂದು ರೈಲ್ವೆ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.