Railway Recruitment : SSLC ಪಾಸ್ ಆದವರಿಗೆ ಅಪ್ರೆಂಟಿಸ್ ಹುದ್ದೆಗಳಿಗೆ ಅವಕಾಶ
Railway Recruitment 2022: ಭಾರತೀಯ ರೈಲ್ವೇಯಲ್ಲಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿರುವವರು ಇಲ್ಲಿ ಗಮನಿಸಿ. ಭಾರತೀಯ ರೈಲ್ವೇ ನೇಮಕಾತಿ ಸೆಲ್ (RRC) ಉತ್ತರ ಮಧ್ಯ ರೈಲ್ವೆ (NCR) ನಲ್ಲಿನ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭಾರತೀಯ ರೈಲ್ವೆಯ ಅಧಿಕೃತ ವೆಬ್‌ಸೈಟ್ rrcpryj.org ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
.ಹುದ್ದೆಗಳ ವಿವರಗಳು:
- ಒಟ್ಟು ಹುದ್ದೆಗಳ ಸಂಖ್ಯೆ- 1659
- ಪ್ರಯಾಗರಾಜ್- 703 ಹುದ್ದೆಗಳು
- ಝಾನ್ಸಿ- 660 ಹುದ್ದೆಗಳು
- ಆಗ್ರಾ- 296 ಹುದ್ದೆಗಳು
ಶೈಕ್ಷಣಿಕ ಅರ್ಹತೆ – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಟ 50% ಅಂಕಗಳೊಂದಿಗೆ ಮಾನ್ಯತೆ ಪಡೆದ ಮಂಡಳಿಯಿಂದ SSC/ಮೆಟ್ರಿಕ್ಯುಲೇಷನ್/10ನೇ ತರಗತಿ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಲ್ಲದೆ ಸಂಬಂಧಿತ ವಿಷಯದಲ್ಲಿ ಐಟಿಐ ಮಾಡಿರಬೇಕು.
ವಯೋಮಿತಿ: 15 ರಿಂದ 24 ವರ್ಷಗಳವರೆಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಶುಲ್ಕ: ಅರ್ಜಿ ಶುಲ್ಕವಾಗಿ ಅಭ್ಯರ್ಥಿಗಳು 100 ರೂ. ಪಾವತಿಸಬೇಕಾಗುತ್ತದೆ.
ಪ್ರಮುಖ ದಿನಾಂಕ: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಆಗಸ್ಟ್ 1, 2022








