Rain : ತಮಿಳುನಾಡಿನಲ್ಲಿ ಭಾರೀ ಮಳೆ – 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ತಮಿಳುನಾಡಿನ 10 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಕಡಿಮೆಯಾಗಿಲ್ಲ.
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಹಲವೆಡೆ ಪ್ರವಾಹದ ಭೀತಿ ಎದುರಾಗಿದ್ದು, ಈರೋಡ್ ಜಿಲ್ಲೆಯಲ್ಲಿ ಪ್ರವಾಹದ ಎಚ್ಚರಿಕೆಯನ್ನು ನೀಡಲಾಗಿದೆ.
ಸತ್ಯಮಂಗಲ, ಗೋಬಿಶೆಟ್ಟಿಪಾಲೆಂ, ಅಮ್ಮಾಪೇಟ್ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಹಲವೆಡೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಮುಂದಿನ 2 ದಿನಗಳವರೆಗೆ ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ಅನೇಕ ರಾಜ್ಯಗಳಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








