Rain – ಉತ್ತರ ಒಳನಾಡಿಗೆ ಮಳೆ ಅಲರ್ಟ್
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ.
ಈ ನಡುವೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮಳೆ ಅಲರ್ಟ್ ನೀಡಿದೆ.
ಹೀಗಾಗಿ ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದಲ್ಲದೆ ರಾಜ್ಯದಾದ್ಯಂತ ಇಂದು ಸಾಧಾರಣ ಮಳೆಯಾಗಲಿದೆ ಎಂದು ಕೂಡ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Rain Alert – ಉತ್ತರ ಒಳನಾಡಿಗೆ ಮಳೆ ಅಲರ್ಟ್








