Rain | ರಾಜ್ಯದ ಹಲವೆಡೆ ಭಾರಿ ಮಳೆ ಎಚ್ಚರಿಕೆ
ಬೆಂಗಳೂರು : ರಾಜ್ಯದ ಹಲವೆಡೆ ಮಳೆಯಾಗುತ್ತಲೇ ಇದೆ. ಈ ನಡುವೆ ಬಂಗಾಳಕೊಲ್ಲಿಯಲ್ಲಿ ಸದ್ಯ ಮೇಲ್ಮೈ ಸುಳಿಗಾಳಿ ಉಂಟಾಗಿದೆ.
ಹೀಗಾಗಿ ರಾಜ್ಯದ ಹಲವೆಡೆ ಎರಡು ದಿನ ಮಳೆ ಮುಂದುವರೆಯಲಿದೆ.
ಕರಾವಳಿ, ಮಲೆನಾಡು ಸೇರಿದಂತೆ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗಲಿದೆ. ಜೊತೆಗೆ ಒಳನಾಡು ಭಾಗದಲ್ಲಿಯೂ ಮಳೆ ಸುರಿಯಲಿದೆ.
ಇತ್ತ ಹಳೆ ಮೈಸೂರು ಭಾಗದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.