ಇಂದಿನಿಂದ ರಾಜ್ಯದಲ್ಲಿ ಮೂರು ದಿನ ಭಾರಿ ಮಳೆ Rain saaksha tv
ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಗಳಿವೆ ಎಂದು ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.
ಅರಬ್ಬಿ ಸಮುದ್ರದ ಪೂರ್ವಭಾಗದಲ್ಲಿ ಕಡಿಮೆ ಒತ್ತಡವಿರುದ ವಿಸ್ತರಿಸಿದ ಪ್ರದೇಶ ನಿರ್ಮಾಣವಾಗಿದೆ.
ಇದರ ಪರಿಣಾಮ ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.
ಇಂದಿನಿಂದ ಮುಂದಿನ 24ರ ವರೆಗೆ ಕರಾವಳಿ ಭಾಗದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗಲಿದ್ದು, ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನ ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಈ ಮೂರು ದಿನಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ಸಿ.ಎಸ್.ಪಾಟೀಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









