RAIN | ಮಳೆಗೆ ಬೆಳೆ ಹಾನಿ | ಪರಿಹಾರಕ್ಕೆ ರೈತರ ಒತ್ತಾಯ
ಧಾರವಾಡ : ರಾಜ್ಯದಾದ್ಯಂತ ವರುಣನ ಆರ್ಭಟ ಮುಂದುವರೆದಿದೆ. ಉತ್ತರ ಕರ್ನಾಟಕ, ಮೈಸೂರು ಭಾಗ, ಕರಾವಳಿ ಹೀಗೆ ರಾಜ್ಯದ ಎಲ್ಲಾ ಭಾಗಗಳಲ್ಲೂ ಮಳೆರಾಯ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ.
ಇದರಿಂದ ನಾನಾ ಅವಾಂತರಗಳು ಸೃಷ್ಟಿಯಾಗಿವೆ. ಅದೆಷ್ಟೋ ಮಂದಿ ಮನೆ ಕಳೆದುಕೊಂಡಿದ್ದರೇ, ಸಾವಿರಾರು ಎಕೆರ ಜಮೀನುಗಳು ಜಲಮಯವಾಗಿವೆ.
ಮಳೆಯಿಂದಾಗಿ ರೈತರು ಬೆಳೆ ಕಳೆದುಕೊಂಡು ಕಂಗಾಲಾಗಿದ್ದು, ದಿಕ್ಕೆ ತೋಚದ ಪರಿಸ್ಥಿತಿಯಲ್ಲಿದ್ದಾರೆ.
ಹೀಗಾಗಿ ಮಳೆಯಿಂದ ಹಾನಿಯಾದ ಬೆಳೆಗಳ ಪರಿಹಾರಕ್ಕೆ ಆಗ್ರಹಿಸಿ ಧಾರವಾಡದಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ಭಾರತಿಯ ಕಿಸಾನ್ ಸಂಘ-ಕರ್ನಾಟಕ ಸಂಘಟನೆಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಧಾರವಾಡದ ಡಿಸಿ ಕಚೇರಿ ಎದುರು ಜಮಾಯಿಸಿರುವ ಪ್ರತಿಭಟನಾಕಾರರು, ಜಿಲ್ಲಾಡಳಿತ ಬೆಳೆ ಸಮೀಕ್ಷೆ ಶೀಘ್ರವಾಗಿ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಅಲ್ಲದೇ ಮಳೆಯಿಂದಾಗಿ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಮೆಕ್ಕೆಜೋಳ, ಸೋಯಾಬಿನ್, ವಠಾಣಿ, ಮುಂತಾದ ಬೆಳೆಗಳು ಸಂಪೂರ್ಣ ಹಾಳಾಗಿದ್ದು, ಪ್ರತಿ ಎಕರೆಗೆ ಕನಿಷ್ಠ ರೂ.20,000 ಗಳನ್ನು ಪರಿಹಾರ ನೀಡಲು ಒತ್ತಾಯ ಮಾಡಿದ್ದಾರೆ.