ರಾಜ್ಯದ ಒಟ್ಟು 24 ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ – ಯೆಲ್ಲೊ ಅಲರ್ಟ್
ರಾಜ್ಯದಲ್ಲಿ ಮುಂಗಾರು ಚುರುಕು ಪಡೆದಿದೆ.. ಒಳನಾಡು , ಕರಾವಳಿ ಭಾಗಗಳಲ್ಲಿ ಜುಲೈ 6ರಿಂದ 8ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಕರಾವಳಿಯ ಭಾಗಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಂಗಳೂರು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.. ಹೀಗಾಗಿ ಜು.10ರವರೆಗೆ 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ತುಮಕೂರು, ಶಿವಮೊಗ್ಗ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಯಾದಗಿರಿ, ವಿಜಯಪುರ, ಕಲಬುರ್ಗಿ ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಣೆಯಾಗಿದೆ.
ಅನ್ಲಾಕ್ 3.0 – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಹಜ ಸ್ಥಿತಿಗೆ ಮರಳಿದ ಜೀವನ