ರಾಜ್ಯದಲ್ಲಿ ಮುಂದಿನ 4 ದಿನ ಗುಡುಗು ಸಹಿತ ಮಳೆ Rain
ಬೆಂಗಳೂರು : ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ ಆಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದಿನಿಂದ ಜೂನ್ 3 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಗಳಿವೆ.
ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಜಾಸ್ತಿ ಹಿನ್ನೆಲೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವರ್ಷಧಾರೆ ಆಗಲಿದೆ.
ಹವಾಮಾನ ಇಲಾಖೆ ಈಗಾಗಲೇ ಕೆಲ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಉತ್ತರ ಕನ್ನಡ , ದಕ್ಷಿಣ ಕನ್ನಡ , ಉಡುಪಿ , ಬೀದರ್ , ಗದಗ , ಬೆಂಗಳೂರು ನ. ಬೆಂಗಳೂರು ಗ್ರಾಮಾಂತರ, ಚಿಕ್ಕಮಂಗಳೂರು,
ಚಿತ್ರದುರ್ಗ , ಕೊಡುಗು ಕೋಲಾರ , ಚಿಕ್ಕಮಂಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದೆ.
ಸದ್ಯ ಈ ಭಾಗದಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆದಿದೆ.