ರಾಜ್ಯದ 17 ಜಿಲ್ಲೆಗಳಲ್ಲಿ ನವೆಂಬರ್ 27ರಿಂದ ಮತ್ತೆ ಮಳೆ ಆರಂಭವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಚಳಿಯ ಅನುಭವವಾಗುತ್ತಿದೆ. ಆದರೂ ಮಳೆಯ ಮುನ್ಸೂಚನೆ ಸಿಕ್ಕಿದ್ದರಿಂದಾಗಿ ಜನರು ಆತಂಕ ವ್ಯಕ್ತಪಡಿಸುವಂತಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.








