ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಿ, ಚಳಿಗಾಲ ಆರಂಭವಾಗಿತ್ತು. ಈ ಮಧ್ಯೆಯೂ ಫೆಂಗಲ್ ಚಂಡಮಾರುತದಿಂದಾಗಿ ಕೆಲವೆಡೆ ಮಳೆಯಾಗಿತ್ತು. ಈಗ ಹಿಂದೂ ಮಹಾಸಾಗರದಲ್ಲಿ ಕಡಿಮೆ ಒತ್ತಡದ ಪ್ರದೇಶ ರೂಪುಗೊಂಡಿದ್ದು, ಮಳೆಯ ಮುನ್ಸೂಚನೆ ನೀಡಲಾಗಿದೆ.
ಪರಿಣಾಮವಾಗಿ ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಕೂಡ ಸುರಿದಿದೆ. ಅಲ್ಲದೇ, ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಮುನ್ಸೂಚನೆ ಇದೆ.








