ಬೆಂಗಳೂರು ಸೇರಿದಂತೆ ರಾಜ್ಯದ 21 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕರಾವಳಿಯ ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತ್ರ, ಬೆಂಗಳೂರು ನಗರ, ಉತ್ತರ ಒಳನಾಡಿನ ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೂಡಿದೆ.
ಗುರುವಾರ ಸಂಜೆಯಿಂದಲೇ ಬೆಂಗಳೂರಿನ ಸುತ್ತಮುತ್ತಲ ಪ್ರದೇಶಗಳಲ್ಲಿ ಮಳೆಯಾಗಿದೆ. ಈಗ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು ಶುಕ್ರವಾರ ಬೆಳಗ್ಗೆಯಿಂದಲೇ ಮಳೆಯಾಗುತ್ತಿದೆ. ಚಳಿಯಲ್ಲಿಯೂ ಮಳೆಯ ಅನುಭವವಾಗುತ್ತಿರುವುದು ಸಾರ್ವಜನಿಕರನ್ನು ಕಂಗಾಲು ಮಾಡಿದೆ. ಹೀಗಾಗಿ ಹಲವರ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತಿದೆ.








