ಬಂಗಾಳಕೊಲ್ಲಿ, ಹಿಂದೂ ಮಹಾಸಾಗರದಲ್ಲಿ ಕಡಿಮೆ ಒತ್ತಡ ಪ್ರದೇಶ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ, ಉತ್ತರ ಒಳನಾಡಿನ ವಿಜಯನಗರ, ಶಿವಮೊಗ್ಗ, ಕೋಲಾರ, ದಾವಣಗೆರೆ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಕರಾವಳಿಯ ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








