ರಾಜ್ಯದ 25 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ,ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ಬೆಂಗಳೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಾರ್ಚ್ 25ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದ, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ. ಕಳೆದ 24 ಗಂಟೆಯಲ್ಲಿ ಕೊಪ್ಪಳದಲ್ಲಿ 39.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ಹಾಗೂ ಚಾಮರಾಜನಗರದಲ್ಲಿ 18.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿತ್ತು. ಇಂದು ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ ಹಾಗೂ ಮೈಸೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.