ಬೆಂಗಳೂರು: ರಾಜ್ಯದ ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ರೈತರು ಭತ್ತ, ಜೋಳ, ಅಡಿಕೆ ಸೇರಿದಂತೆ ಹಲವು ಬೆಳೆಗಳ ಕಟಾವಿನಲ್ಲಿ ನಿರತರಾಗಿದ್ದು, ಅಕಾಲಿಕ ಮಳೆ ರೈತರನ್ನು ಕಂಗಾಲು ಮಾಡಿದೆ.
ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ಮಳೆಯಾಗುತ್ತಿದೆ. ಇದರ ಪರಿಣಾಮ ಕಟಾವು ಮಾಡಿದ ಬೆಳೆ ಮಳೆಗೆ ನೆನೆದು ಹೋಗಿದ್ದರಿಂದ ರೈತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇಂದು ಹಾಗೂ ನಾಳೆ ಕೂಡ ಬೆಂಗಳೂರು, ಮಂಡ್ಯ, ಮೈಸೂರು, ಕೊಡಗು, ಹಾಸನ, ಮಂಗಳೂರು, ಶಿವಮೊಗ್ಗ, ಬೆಳಗಾವಿ, ಹಾವೇರಿ, ಗದಗ, ಹಾಸನ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಸಾಧ್ಯತೆಯಿದೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ದಕ್ಷಿಣ ಭಾರತದ ಕರಾವಳಿ ತೀರಕ್ಕೆ ಬುರೇವಿ ಚಂಡಮಾರುತ ಅಪ್ಪಳಿಸಿದೆ. ನಿನ್ನೆ ಬೆಂಗಳೂರಿನಲ್ಲಿ ಬಿಸಿಲು ಇದ್ದರೂ ಸಹ ಇಂದು ಕೂಡ ಬೆಂಗಳೂರಿನ ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ.
ಕರ್ನಾಟಕದ ಕರಾವಳಿ ತೀರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಮತ್ತು ನಾಳೆ ಮಳೆ ಸುರಿಯಲಿದೆ ಎನ್ನಲಾಗಿದೆ. ನಾಳೆವರೆಗೆ ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ಹಾವೇರಿ, ಗದಗ, ಧಾರವಾಡ, ಹುಬ್ಬಳ್ಳಿ ಭಾಗದಲ್ಲಿ ಕೂಡ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಚಳಿಯ ತೀವ್ರತೆ ಹೆಚ್ಚಾಗಲಿದ್ದು, ತುಂತುರು ಮಳೆಯೂ ಸುರಿಯುವ ಸಾಧ್ಯತೆ ಇದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








