ದಾವಣಗೆರೆಯಲ್ಲಿ ಸುರಿದ ಭಾರಿ ಮಳೆ – ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು..
ದಾವಣಗೆರೆ ನಗರ ಸೇರಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬೆಳಗ್ಗೆ 4 ಗಂಟೆಯಿಂದಲೇ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ನಗರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಬೀಡುವು ನೀಡಿದ್ದ ಮಳೆ ಮತ್ತೆ ಶುರುವಾಗಿದ್ದು, ಮೂರು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದೆ. ಮಳೆಯಿಂದಾಗಿ ದಾವಣಗೆರೆ ಜಿಲ್ಲೆಯಲ್ಲಿ ಅವಾಂತರ ಸೃಷ್ಟಿಯಾಗಿದ್ದು ಜನಜೀವನ ತತ್ತರಿಸಿದೆ.
ಭತ್ತದ ಗದ್ದೆಗಳು ನೀರಿನಿಂದ ಜಲಾವೃತವಾಗಿದ್ದರಿಂದ ರೈತರಿತೆ ಮತ್ತೆ ಆತಂಕಕ್ಕೆ ಒಳಗಾಗಿದ್ದಾರೆ. ದಾವಣಗೆರೆಯಲ್ಲಿ ನಗರದ ರಸ್ತೆಗಳು ಮಳೆ ನೀರಿನಿಂದ ಸಂಪೂರ್ಣವಾಗಿ ಜಲಾವೃತವಾಗಿದೆ. ಮಕ್ಕಳು ಶಾಲೆಗಳಿಗೆ ತೆರಳಲು ಸಾಕಷ್ಟು ತೊಂದರೆಯುಂಟಾಗಿದೆ.
Rain: Heavy rain in Davangere – water has entered the low-lying areas..