rain
ರಾಜ್ಯಕ್ಕೆ ಮತ್ತೆ ವರುಣಾಘಾತ : ಹವಾಮಾನ ಇಲಾಖೆ ಎಚ್ಚರಿಕೆ..!
ರಾಜ್ಯದಲ್ಲಿ ಈ ವರ್ಷ ಮಳೆ ಅಟ್ಟಹಾಸ ಹೆಚ್ಚಾಗಿಯೇ ಇದೆ. ಕೆಲ ತಿಂಗಳುಗಳ ವರೆಗೂ ಪ್ರವಾಹದಿಂದ ತತ್ತರಿಸಿದ್ದ ರಾಜ್ಯದಲ್ಲಿ ಇತ್ತೀಚೆಗೆ ನಿವಾರ್ ಚಂಡಮಾರುತದ ಪರಿಣಾಮ ಹೊಡೆತ ನೀಡಿತ್ತು. ಇದೀಗ ಮತ್ತೆ ರಾಜ್ಯಕ್ಕೆ ವರುಣಾಘಾತವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ ಮುಂದಿನ 36 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಕರ್ನಾಟಕದಲ್ಲಿ ನಾಳೆಯಿಂದ 4 ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಜಾತಿ ಒಡೆಯೋದ್ರಲ್ಲಿ ಸಿದ್ದರಾಮಯ್ಯ ನಿಸ್ಸೀಮ : ಶೋಭಾ ಕರಂದ್ಲಾಜೆ
ಕರ್ನಾಟಕ ಅಷ್ಟೇ ಅಲ್ಲದೇ ತಮಿಳುನಾಡಿನ ಕರಾವಳಿ ಭಾಗಕ್ಕೂ ಮತ್ತೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ. ಇದರಿಂದಾಗಿ ಕಾಲೈಕಲ್, ಕೇರಳ, ಆಂಧ್ರಪ್ರದೇಶ, ಪುದುಚೇರಿ, ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
rain
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








