ತಮಿಳುನಾಡಿಗೆ ಅಪ್ಪಳಿಸಲಿದೆ ಚಂಡಮಾರುತ : ರಾಜ್ಯದಲ್ಲಿ ಮೂರು ದಿನ ಮಳೆ

1 min read
Heavy rain saaksha tv

ತಮಿಳುನಾಡಿಗೆ ಅಪ್ಪಳಿಸಲಿದೆ ಚಂಡಮಾರುತ : ರಾಜ್ಯದಲ್ಲಿ ಮೂರು ದಿನ ಮಳೆ rain-hurricane saaksha tv

ಬೆಂಗಳೂರು : ಇಂದು ನೆರೆಯ ತಮಿಳುನಾಡಿಗೆ ಚಂಡಮಾರುತ ಅಪ್ಪಳಿಸಲಿದ್ದು, ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಗಳಿವೆ.

ಇವತ್ತು, ನಾಳೆ, ನಾಡಿದ್ದು ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಭಾರಿ ಮಳೆ ಸುರಿದು ನಾನಾ ಅವಾಂತರಗಳು ಸೃಷ್ಠಿಯಾಗಿವೆ.

rain-hurricane saaksha tv

ಸಾವಿರಾರು ಎಕರೆ ಬೆಳೆ ನಾಶವಾಗಿದ್ದು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಇತ್ತ ಜನಜೀವನ ಕೂಡ ಅಸ್ತವ್ಯಸ್ತಗೊಂಡಿದೆ.

ಇನ್ನು ಚಂಡಮಾರುತದ ಕಾರಣ ತಮಿಳುನಾಡಿನ ತೀರ ಪ್ರದೇಶದ ಜಿಲ್ಲೆಗಳಲ್ಲಿ ಮಳೆಯಾಗ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd