ಇಂದು ಕರ್ನಾಟಕ, ಗೋವಾದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ
ಕಳೆದೆರೆಡು ಮೂರು ದಿನಗಳಿಂದ ರಾಜ್ಯ ಹಾಗೂ ದೇಶದ ಅನೇಕ ಭಾಗಗಳಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ. ಈ ನಡುವೆ ಇಂದಿನಿಂದ ಇನ್ನೂ 2 ದಿನಗಳ ಕಾಲ ಮಳೆ ಹೀಗಿಯೇ ಮುಂದುವರೆಯಲಿದೆ ಎಂದು ಹಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಹೌದು ಅದ್ರಲ್ಲೂ ಗೋವಾ , ಕರ್ನಾಟಕದಲ್ಲಿ ಬಾರೀ ಮಳೆಯಾಗುವ ನಿರೀಕ್ಷೆಯಿದೆ. ಮುಂದಿನ ಎರಡು ದಿನಗಳ ಕಾಲ ಕೊಂಕಣ, ಗೋವಾ ಹಾಗೂ ಕರ್ನಾಟಕದ ವಿವಿಧ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪಶ್ಚಿಮ ಕರಾವಳಿ ಹಾಗೂ ದಕ್ಷಿಣ ಭಾರತದಲ್ಲಿ ಜುಲೈ 16ರಿಂದ ಮಳೆ ಕಡಿಮೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬುಲೆಟಿನ್ ತಿಳಿಸಿದೆ. ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದ ಒಳನಾಡಿನಲ್ಲಿ ಭಾರೀ ಮಳೆ ಹಾಗೂ ಇತರ ಪ್ರದೇಶಗಳಲ್ಲಿ ಸಾಮಾನ್ಯ ಮಳೆ ಜುಲೈ 16ರ ವರೆಗೆ ಮುಂದುವರಿಯಲಿದೆ ಎಂದು ಅದು ತಿಳಿಸಿದೆ.
ಇನ್ನೂ ರಾಜಸ್ಥಾನ, ಉತ್ತರಪ್ರದೇಶ, ಪಂಜಾಬ್, ಹರ್ಯಾಣ, ಮಧ್ಯಪ್ರದೇಶದಲ್ಲಿ ಜುಲೈ 17 ಹಾಗೂ 19ರ ನಡುವೆ ಮಳೆ ಸುರಿಯಲಿದೆ. ಇದೇ ಅವಧಿಯಲ್ಲಿ ಈಶಾನ್ಯ ಭಾರತದಲ್ಲಿ ಕೂಡ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.