ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.








