RAIN | ರಾಜ್ಯದಲ್ಲಿ ಸೆಪ್ಟೆಂಬ್ 2 ರವರೆಗೆ ಭಾರಿ ಮಳೆ
ಬೆಂಗಳೂರು : ಸೆಪ್ಟೆಂಬರ್ 2 ರವರೆಗೆ ರಾಜ್ಯದ ಎಲ್ಲ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿ ಸಮುದ್ರದ ಮಧ್ಯಭಾಗ ಹಾಗೂ ಕೇರಳದ ಸಮುದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಎದ್ದಿದೆ.
ಇದರ ಪರಿಣಾಮ ಕರ್ನಾಟಕದ ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ.
ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು, ಕೋಲಾರ, ಶಿವಮೊಗ್ಗ, ರಾಮನಗರ ಸೇರಿದಂತೆ ಬಹುತೇಕ ಎಲ್ಲ ಕಡೆಗಳಲ್ಲಿ ಮುಂದಿನ ಮೂರು ದಿನಗಳು ಭಾರಿ ಮಳೆಯಾಗಲಿದೆ.
ಹೀಗಾಗಿ ಈ ಎಲ್ಲಾ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 1 ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದು ಮಾತ್ರವಲ್ಲದೇ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಸೇರಿ ಹಲವೆಡೆ ಮೂರು ದಿನಗಳ ಕಾಲ ಮಳರಾಯ ಅಬ್ಬರಿಸಲಿದ್ದಾನೆ.
ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದು ಹೀಗಿದ್ದರೇ ಕಳೆದ ಮೂರು ನಾಲ್ಕು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ.
ರಾಮನಗರ, ಬೆಂಗಳೂರು, ಯಾದಗಿರಿ, ಕೋಲಾರ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗಿದ್ದು, ನಾನಾ ಅವಾಂತರಗಳು ಸೃಷ್ಠಿಯಾಗಿವೆ.








