Rain | ಉತ್ತರ ಕನ್ನಡ ಜಿಲ್ಲಾದ್ಯಂತ ಮಳೆಯ ಆರ್ಭಟ | ರೈತ ಸಾವು
ಕಾರವಾರ : ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದ್ದು, ಗಾಳಿ ಸಹಿತ ಮಳೆಗೆ ಮರ ಬಿದ್ದು ರೈತ ಮೃತಪಟ್ಟಿದ್ದಾರೆ.
ಸಿದ್ದಾಪುರದ ಶಿವಳಮನೆಯ ಅಬ್ಬಿಗದ್ದೆಯಲ್ಲಿ ತೋಟದಲ್ಲಿ ಈ ಘಟನೆ ನಡೆದಿದೆ.
ಇಲ್ಲಿ ಕೆಲಸ ಮಾಡುತ್ತಿದ್ದಾಗ ಗಾಳಿ ಮಳೆಗೆ ಮರ ಬಿದ್ದು, ಶ್ರೀಧರ ನಾರಾಯಣ ಹೆಗಡೆ ಕೊನೆಯುಸಿರೆಳೆದಿದ್ದಾರೆ.
ಇದೇ ಗಾಳಿ ಮಳೆಗೆ ಕಾರಿನ ಮೇಲೆ ವಿದ್ಯುತ್ ಕಂಬ ಹಾಗೂ ಮರ ಬಿದ್ದಿದೆ.

ಅದೃಷ್ಟವಶಾತ್ ಓಮ್ನಿಯಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದು, ಮಗು ಮಾತ್ರ ಗಾಯಗೊಂಡಿದೆ.
ತಕ್ಷಣ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಓಮ್ನಿ ಸಂಪೂರ್ಣ ಜಖಂಗೊಂಡಿದೆ.
ಅಂದಹಾಗೆ ಕರಾವಳಿಯಲ್ಲಿಯೂ ಉತ್ತಮ ಮಳೆಯಾಗಿದೆ.
ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳದಲ್ಲಿ ಭಾರಿ ಮಳೆಯಾಗಿದೆ.
ಇದರಿಂದ ಜನ ಜೀವನ ಅಸ್ತವ್ಯಸ್ತಗೊಂಡಿದೆ.








