ರಾಜ್ಯದ ಬಹುತೇಕ ಕಡೆ ಮಳೆ ತಗ್ಗಿದ್ದು, ಚಳಿ ಆರಂಭವಾಗಿದೆ. ಆದರೆ, ಇನ್ನೂ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗು ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ.








