ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, 15 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ಕೊಡಗು, ಮೈಸೂರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಲ್ಲದೇ, ಕರಾವಳಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಕಳೆದ 24 ಗಂಟೆಗಳಲ್ಲಿ ಕೊಪ್ಪಳದಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್ನಲ್ಲಿ 19.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.