ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಕೆಂಕೆರೆ ಕೆರೆ ಹತ್ತಿರ ಕಾಡು ಹೆಣ್ಣಾನೆ ಸಾವನ್ನಪ್ಪಿದೆ. ಇದು ಹಲವು ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದ್ದು, ಹೆಣ್ಣಾನೆಯ ಪಕರೀಕ್ಷೆಯನ್ನು ಪಶು ವೈದ್ಯಾಧಿಕಾರಿಗಳು ನಡೆಸಿದ್ದಾರೆ. ಪರೀಕ್ಷೆಯಲ್ಲಿ ಹೆಣ್ಣಾನೆ ಸಹಜವಾಗಿ ಸಾವನ್ನಪ್ಪಿದೆ ಎಂದು ಹೇಳಿದ್ದಾರೆ.