ಕಲಬುರಗಿ : ಕಲಬುರಗಿ ಜಿಲ್ಲೆಯಾದ್ಯಂತ ಮುಂಜಾನೆಯಿಂದಲೇ ಜಿಟಿಜಿಟಿ ಮಳೆ ಶುರುವಾಗಿದ್ದು, ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಜನರು ಹೈರಾಣಾಗಿದ್ದಾರೆ. ಜಿಟಿಜಿಟಿ ಮಳೆಯಿಂದಾಗಿ ಜನರು ದೈನಂದಿನ ಚಟುವಟಿಕೆಗಳಲ್ಲಿ ತೊಂದರೆ ಅನುಭವಿಸುವಂತಾಗಿದೆ. ಇನ್ನ ನಾಲ್ಕೈದು ದಿನಗಳಿಂದ ಜಿಲ್ಲೆಯಾದ್ಯಂತ ಸತತವಾಗಿ ಮಳೆ ಸುರಿಯುತ್ತಿದ್ದು, ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಇತ್ತ ಮಳೆಯಿಂದಾಗಿ ರಸ್ತೆಯಲ್ಲಿ ಸಂಚರಿಸಲು ವಾಹನ ಸವಾರರು ಪರದಾಡುವಂತಾಗಿದೆ. ಮತ್ತೊಂದೆಡೆ ಬೆಳೆ ಹಾಳಾಗುವ ಆತಂಕದಲ್ಲಿ ಜಿಲ್ಲೆಯ ರೈತರಿದ್ದಾರೆ. ಇನ್ನೂ ಮಳೆಯಿಂದಾಗಿ ದಿನನಿತ್ಯ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಯ ಜನರು ಮಳೆ ನಿಂತರೇ ಸಾಕಪ್ಪ ಎನ್ನುವಂತಾಗಿದೆ.









