ಮೇ 18ರವರೆಗೆ ಕರಾವಳಿ, ಮಲೆನಾಡು ಭಾಗಗಳಲ್ಲಿ ಭಾರೀ ಮಳೆ..!
ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಈಗಾಗಲೇ ರಾಜ್ಯದ ಜಿಲ್ಲೆಗಳಲ್ಲಿ ಮಳೆಯಾಗ್ತಿದೆ. ಇನ್ನೂ ಮೇ 18 ರವರೆಗೂ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಇನ್ನೂ 2 ದಿನ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಕರಾವಳಿ ತೀರಗಳಲ್ಲಿ ಮೀನುಗಾರರು ಮುನ್ನೆಚ್ಚರಿಕೆಯಿಂದ ಇರಬೇಕು ಎಂದು ಸಲಹೆ ನೀಡಲಾಗಿದೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.