ಮುಂದಿನ ಐದು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ Rain saaksha tv
ಬೆಂಗಳೂರು : ಮುಂದಿನ ಐದು ದಿನ ರಾಜ್ಯದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಇದ್ದು, ಬಹುತೇಕ ಭಾಗಗಳಲ್ಲಿ ತುಂತುತು ಮಳೆಯಾಗುತ್ತಿದೆ.
ಅಕ್ಟೋಬರ್ 10 ರಂದು ಉತ್ತರ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತ ಕಾಣಿಸಿಕೊಂಡಿರುವುದರಿಂದ ಮುಂದಿನ ಐದು ದಿನ ರಾಜ್ಯದಲ್ಲಿ ಮಳೆ ಆಗಲಿದೆ.
ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇವತ್ತು 8.4 ಮಿ.ಮಿ ಮಳೆ ದಾಖಲಾಗಿದೆ.
ನಾಳೆ ಹಾಗೂ ನಾಡಿದ್ದು ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ಹೆಚ್ಚಿನ ಮಳೆ ಸಾಧ್ಯತೆ ಇದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಹಾಗೂ ಗ್ರಾಮಾಂತರಕ್ಕೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.









