ಮಾಹಾರಾಷ್ಟ್ರದಲ್ಲಿ  ‘ಮಹಾ’ ಮಳೆ : ರೈಲು ಸಂಚಾರಕ್ಕೆ ಅಡಚಣೆ – ಜನಜೀವನ ಅಸ್ತವ್ಯಸ್ತ

1 min read

ಮಾಹಾರಾಷ್ಟ್ರದಲ್ಲಿ  ‘ಮಹಾ’ ಮಳೆ : ರೈಲು ಸಂಚಾರಕ್ಕೆ ಅಡಚಣೆ – ಜನಜೀವನ ಅಸ್ತವ್ಯಸ್ತ

ಮುಂಬೈ : ನೆರೆಯ ಮಾಹಾರಾಷ್ಟ್ರದಲ್ಲಿ ಬಾರೀ ಮಳೆಯಾಗ್ತಾಯಿದ್ದು, ಜನರ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಮಹಾರಾಷ್ಟ್ರಕ್ಕೆ ಒಂದು ರೀತಿ ಮಳೆ ಹಾಗೂ ಕೊರೊನಾ ಶಾಪವಾಗಿದ್ದು, ಮಳೆಯ ಪ್ರಬಾವೂ ಇಲ್ಲಿಯೇ ಹೆಚ್ಚಾಗಿ ಬೀರಿದ್ರೆ , ಕೊರೊನಾ ಪರಿಣಾಮವನ್ನ ಹೆಚ್ಚಾಗಿ ಅನುಭವಿಸಿದ ರಾಜ್ಯವೂ ಇದೇ ಆಗಿದೆ.. ಮಹಾರಾಷ್ಟ್ರದಲ್ಲಿ ವರುಣನ ಅಬ್ಬರಕ್ಕೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.. ಆದ್ರೆ ವರುಣ ಮಾತ್ರ ಶಾಂತನಾಗುವ ಲಕ್ಷಣ ಕಾಣುತ್ತಿಲ್ಲ.. ಧಾರಾಕಾರ ಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.. ರಸ್ತೆಗಳು ಕೆರೆಯಂತೆ ಮಾರ್ಪಾಡಾಗಿವೆ.. ಅಲ್ಲಲ್ಲೆ ಗೋಡೆ ಕುಸಿತ ಭೂಮಿ ಕುಸಿತದಿಂದಾಗಿ ಹಲವರ ಜೀವ ಹೋಗಿದೆ.. ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಮುಂಬೈನಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ..

ಇನ್ನೂ ಮುಂಬೈಗೆ ಹೊಂದಿಕೊಂಡಿರುವ ಠಾಣೆ ಮತ್ತು ಪಾಲ್ಘರ್‌ ಜಿಲ್ಲೆಗಳಲ್ಲಿ ಬುಧವಾರ ರಾತ್ರಿ ಮತ್ತು ಗುರುವಾರ ಬೆಳಿಗ್ಗೆ ಭಾರಿ ಮಳೆ ಸುರಿದಿದೆ. ಇದರಿಂದಾಗಿ ಹಲವು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ರೈಲ್ವೆ ಹಳಿಗಳ ಮೇಲೆ ಬಂಡೆ ಉರುಳಿದ್ದರಿಂದ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ. ಕೆಲವು ಗ್ರಾಮಗಳು ಜಲಾವೃತವಾಗಿವೆ. ಎನ್‌ಡಿಆರ್‌ಎಫ್‌ ತಂಡಗಳು ಇಲ್ಲಿ ಸಿಲುಕಿದ್ದ ನೂರಾರು ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಸಾರ ಬಳಿಯ ಉಂಬ್ರೇಲಿ ನಿಲ್ದಾಣದಲ್ಲಿನ ಪ್ಲ್ಯಾಟ್‌ಫಾರ್ಮ್‌ವರೆಗೆ ನೀರು ತುಂಬಿಕೊಂಡಿದೆ. ಘಾಟ್‌ ಬಳಿಯ ರೈಲ್ವೆ ಹಳಿಗಳ ಮೇಲೆ ಬಂಡೆಗಳು ಉರುಳಿವೆ. ಇದರಿಂದಾಗಿ ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಬಂಡೆಗಳನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾ ಅಧಿಕಾರಿಗಳು ತಿಳಿಸಿದರು.

ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಕೊಂಕಣ ರೈಲ್ವೆ ಮಾರ್ಗದಲ್ಲಿ ರೈಲು ಸೇವೆಯನ್ನು ಗುರುವಾರ ಬೆಳಿಗ್ಗೆ ಸ್ಥಗಿತಗೊಳಿಸಲಾಗಿದೆ. ರತ್ನಾಗಿರಿಯ ಚಿಪ್ಲುನ್ ಮತ್ತು ಕಾಮತೆ ನಿಲ್ದಾಣಗಳ ನಡುವಿನ ವಶಿಷ್ಠ ನದಿ ಸೇತುವೆ ಬಳಿ ನೀರಿನ ಮಟ್ಟವು ಭಾರಿ ಏರಿಕೆಯಾಗಿದೆ.ಇದರಿಂದ ಅಪಾಯದ ಮುನ್ಸೂಚನೆಯಿದ್ದು ರೈಲು ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೊಂಕಣ ರೈಲ್ವೆ ವಕ್ತಾರರು ತಿಳಿಸಿದ್ದಾರೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.ಕೊಂಕಣ ರೈಲ್ವೆ ಮಹಾರಾಷ್ಟ್ರದ ರಾಯಘಡ ಜಿಲ್ಲೆಯ ರೋಹಾದಿಂದ ಮಂಗಳೂರು ಸಮೀಪದ ತೋಕೂರುವರೆಗೆ 756 ಕಿ.ಮೀ ಉದ್ದ ಟ್ರ್ಯಾಕ್‌ ಹೊಂದಿದೆ. ಈ ಮಾರ್ಗ ಮಹಾರಾಷ್ಟ್ರ, ಗೋವಾ ಮತ್ತು ಕರ್ನಾಟಕ ಮೂರು ರಾಜ್ಯಗಳ ನಡುವೆ ಸಂಪರ್ಕವನ್ನು ಕಲ್ಪಿಸುತ್ತದೆ. ಭಾರೀ ಮಳೆಯಿಂದಾಗಿ ರೈಲು ಹಳಿಗಳ ಮೇಲೆ ಮಣ್ಣು ಕುಸಿತ, ಭೂಕುಸಿತ ಕಂಡು ಬಂದಿದ್ದು, ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಮಹಾರಾಷ್ಟ್ರದಲ್ಲಿ ‘ಮಹಾ’ ಮಳೆ : ಪ್ರವಾಹ – ರೈಲುಗಳಲ್ಲಿ ಸಿಲುಕಿ 6,000 ಪ್ರಯಾಣಿಕರ ಪರದಾಟ

ಬೆಳಗಾವಿಯಲ್ಲಿ ಭಾರಿ ಮಳೆ : ಮನೆ ಕುಸಿತ

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd