ಬೆಂಗಳೂರು: ರಾಜ್ಯದಲ್ಲಿ ಚಳಿಯ ಪ್ರಭಾವ ಹೆಚ್ಚುತ್ತಿರುವಂತೆಯೇ ಉತ್ತರ ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಬೆಳಗಾವಿ, ಬಾಗಲಕೋಟೆ, ಕಲಬುರ್ಗಿ ಸೇರಿದಂತೆ ಉತ್ತರ ಒಳನಾಡು ಹಾಗೂ ತೆಲಂಗಾಣದಲ್ಲಿ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶನಿವಾರ ಬಿಡುಗಡೆಯಾಗಿರುವ ಬುಲೆಟಿನ್ ಪ್ರಕಾರ ಮುಂದಿನ ಕೆಲವು ಗಂಟೆಗಳಲ್ಲಿ ಬಹುತೇಕ ಉತ್ತರ ಒಳನಾಡಿನಲ್ಲಿ ತುಂತುರು ಮಳೆಯಾಗಲಿದೆ. ನಿವಾರ್ ಚಂಡಮಾರುತದಿಂದಾಗಿ ಗುರುವಾರ, ಶುಕ್ರವಾರ ಬೆಂಗಳೂರು ಸಹಿತ ಹಲವೆಡೆ ಮಳೆಯಾಗಿತ್ತು. ಅದಾದ ಬೆನ್ನಲ್ಲೇ ಇದೀಗ ಉತ್ತರ ಒಳನಾಡಿನಲ್ಲಿ ಮಳೆ ಸುರಿಯುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕಳೆದ ಆಗಸ್ಟ್ ನಿಂದ ಅಕ್ಟೋಬರ್ ವರೆಗೆ ಉತ್ತರ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗಿತ್ತು. ಇದರಿಂದ ಅಪಾರ ಪ್ರಮಾಣದಲ್ಲಿ ಬೆಳೆಹಾನಿಯಾಗಿತ್ತು. ಇನ್ನು ರಾಜ್ಯದಲ್ಲಿ ಉಷ್ಣಾಂಶ ಇಳಿಮುಖವಾಗಿದ್ದು, ಕಳೆದ ರಾತ್ರಿ ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ದಾಖಲಾಗಿದೆ.
ತುಂತುರು ಮಳೆ ಜೊತೆಗೆ ವಿಪರೀತ ಚಳಿ ಜನರನ್ನು ಹೈರಾಣಾಗಿಸಿದೆ. ಉತ್ತರ ಭಾರತದಲ್ಲಿ ಶೀತ ಗಾಳಿಯ ಪ್ರಭಾವ ಹೆಚ್ಚುತ್ತಿದ್ದು,
ಕಾಶ್ಮೀರ ಕಣಿವೆಯಲ್ಲಿ ತಾಪಮಾನ ಮೈನಸ್‍ಗಿಳಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಉಷ್ಣಾಂಶ ಇಳಿಮುಖವಾಗಿದೆ. ಮುಂದಿನ ದಿನಗಳಲ್ಲಿ ಚಳಿ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸುಳಿವು ನೀಡಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








